ADVERTISEMENT

ಭದ್ರಾವತಿ: ಚತುರ್ಮಾಸ್ಯ ವ್ರತ ಪೂಜಾನುಷ್ಠಾನದ ಸೀಮೋಲ್ಲಂಘನ ಇಂದು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 4:55 IST
Last Updated 7 ಸೆಪ್ಟೆಂಬರ್ 2025, 4:55 IST
ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ
ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ   

ಭದ್ರಾವತಿ: ಹಳೇನಗರದ ಕಾಳಿಕಾಂಬಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಸಮಾಜದ ವತಿಯಿಂದ ಸಾವಿತ್ರೀ ಪೀಠಾಧೀಶ್ವರ ಜಗದ್ಗುರು ಅಷ್ಟೋತ್ತರ ಶತಶ್ರೀ ಶಂಕರಾತ್ಮಾನಂದ ಸರಸ್ವತಿ ಸ್ವಾಮೀಜಿ 8ನೇ ವರ್ಷದ ಚಾತುರ್ಮಾಸ್ಯ ವ್ರತ ಪೂಜಾನುಷ್ಠಾನದ ಸೀಮೋಲ್ಲಂಘನ ಕಾರ್ಯಕ್ರಮ ಸೆ. 7ರಂದು ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 7 ಗಂಟೆಗೆ ವಡ್ಡನಹಾಳ್ ಶ್ರೀ ಮಠದ ಗುರು ಕುಟೀರದಿಂದ ಶ್ರೀಗಳು ಹೊರಟು 8.30ಕ್ಕೆ ಭದ್ರಾನದಿಯಲ್ಲಿ ತೀರ್ಥಸ್ನಾನ ನೆರವೇರಿಸುವರು. ಕಾಳಿಕಾಂಬಾ ದೇವಸ್ಥಾನಕ್ಕೆ 9.30ಕ್ಕೆ ಆಗಮಿಸಿ ದೇವಿಯ ದರ್ಶನ ಪಡೆಯುವರು. ನಂತರ ಶ್ರೀಗಳ ಪಾದಪೂಜೆ ನಡೆಯಲಿದೆ.

ಬೆಳಿಗ್ಗೆ 10.30ಕ್ಕೆ ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಕಾಳಿಕಾಂಬಾ ಸೇವಾ ಸಮಿತಿ ಹಾಗೂ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಿ.ಕೆ ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.

ADVERTISEMENT

ಸಮಿತಿ ಗೌರವಾಧ್ಯಕ್ಷ ಪಿ. ವೆಂಕಟರಮಣ ಶೇಟ್, ವಡ್ಡನಹಾಳ್ ಶ್ರೀ ಮಠದ ಅಧ್ಯಕ್ಷ ಟಿ. ಮಹೇಂದ್ರಚಾರ್, ಶ್ರೀ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಬಿ.ಎಲ್. ನಾಗರಾಜ, ಕಾರ್ಯಾಧ್ಯಕ್ಷ ಸಿ. ರಾಮಾಚಾರಿ, ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳಿ ಗೌರವಾಧ್ಯಕ್ಷೆ ಭಾಗ್ಯಮ್ಮ ಶಾಂತಾಚಾರ್, ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕೃಷ್ಣಮೂರ್ತಿ  ಇತರರು ಉಪಸ್ಥಿತರಿರುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.