
ಭದ್ರಾವತಿ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಅಧ್ಯಕ್ಷರಾಗಿ ತಳ್ಳಿಕಟ್ಟೆ ಎಚ್. ಲೋಕೇಶಪ್ಪ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಬಾರಂದೂರು ಕ್ಷೇತ್ರದ ಡಿ.ಶಿವಶಂಕರ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಬಿ.ಕೆ.ಶಿವಕುಮಾರ್, ಜಯನಗರ ಕ್ಷೇತ್ರದ ರವೀಂದ್ರನಾಯ್ಡು, ಕೆಂಚೇನಹಳ್ಳಿ ಕ್ಷೇತ್ರದ ಸುರೇಶ್, ನಗರ ಕ್ಷೇತ್ರದ ಬಿ.ಟಿ. ನಾಗರಾಜ್, ಮಾರಶೆಟ್ಟಿಹಳ್ಳಿ ಕ್ಷೇತ್ರದ ಕೆ. ಶ್ರೀನಿವಾಸ್, ಅಗಸನಹಳ್ಳಿ ಕ್ಷೇತ್ರದ ಕೃಷ್ಣಪ್ಪ, ಕೊಮಾರನಹಳ್ಳಿ ಕ್ಷೇತ್ರದ ಸತ್ಯನಾರಾಯಣರಾವ್, ತಡಸ ಕ್ಷೇತ್ರದ ಖಲೀಂ ಉಲ್ಲಾ, ತಳ್ಳಿಕಟ್ಟೆ ಕ್ಷೇತ್ರದ ಓ.ಎನ್ ರತ್ನಮ್ಮ ಹಾಗು ವಿನೋದಬಾಯಿ ಉಪಸ್ಥಿತರಿದ್ದರು.
ಈಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಶಾಸಕ ಬಿ.ಕೆ. ಸಂಗಮೇಶ್ವರ ಸೇರಿ ಇತರರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.