ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಭಾನುವಾರ ಬೆಳಿಗ್ಗೆ ಹೊಸಸೇತುವೆ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ನಂತರ ನೀರಿನ ಪ್ರಮಾಣ ತುಸು ಕಡಿಮೆಯಾಗಿದೆ.
ಶನಿವಾರ ಮಧ್ಯಾಹ್ನದಿಂದಲೇ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ತಾಲ್ಲೂಕು ಆಡಳಿತ ಹಾಗೂ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಸ್ತುತ ಜಲಾಶಯದ ಒಳ ಹರಿವು 39,017 ಕ್ಯೂಸೆಕ್ ಇದ್ದು, ಇಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಮೂರ್ನಾಲ್ಕು ಅಡಿ ಮಾತ್ರ ಬಾಕಿಯಿದ್ದು, ಈ ಬಾರಿ ನಿರೀಕ್ಷೆಗಿಂತ ಬಹುಬೇಗನೆ ನೀರು ಸಂಗ್ರಹವಾಗುತ್ತಿದೆ. ಇದರಿಂದಾಗಿ ಜಲಾಶಯದ ನೀರು ಆಶ್ರಯಿಸಿ ಕೃಷಿ ಮಾಡುವ ರೈತರ ಮುಖದಲ್ಲಿ ಸಂತಸ ಮೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.