ಭದ್ರಾವತಿ: ಈ ಬಾರಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ನಗರದ ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಸೆ. 22ರ ಸೋಮವಾರ ಬೆಳಿಗ್ಗೆ 10.30ಕ್ಕೆ ನಗರಸಭೆ ಆವರಣದಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ.
ನಗರಸಭೆಯಿಂದ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆಯನ್ನು ವಿಶಿಷ್ಟವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಸಾಹಿತಿಗಳು, ಹೋರಾಟಗಾರರು, ಸಮಾಜ ಸೇವಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದವರನ್ನು ಗುರುತಿಸಿ ಅವರ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಗುತ್ತಿದೆ.
‘ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ನಮ್ಮನ್ನು ಆಹ್ವಾನಿಸಿರುವುದು ನನಗೆ ಹಾಗೂ ಕುಟುಂಬಕ್ಕೆ ಸಂತಸವನ್ನುಂಟು ಮಾಡಿದೆ. ನಾನು ಸಲ್ಲಿಸಿರುವ ಸೇವೆ ಹಾಗೂ ಹಿರಿತನ ಪರಿಗಣಿಸಿ ಉದ್ಘಾಟನೆಗೆ ಆಹ್ವಾನಿಸಿರುವುದು ಹೆಮ್ಮೆಯ ಸಂಗತಿ. ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ನಗರಸಭೆ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಶಿವರುದ್ರಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.