ಭದ್ರಾವತಿ : ಗಾಂಜಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ನಗರದ ಕೂಲಿ ಬ್ಲಾಕ್ ಶೆಡ್ ನಿವಾಸಿ ಆದಿಲ್ ಬಾಷಾನನ್ನು ಬಂಧಿಸಲಾಗಿದೆ.
ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ ಅಡಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೊರಡಿಸಿದ್ದ ಸ್ಪೆಷಲ್ ಸಿ ೨೪೮ /೨೨ ಕಲಂ ೨೦(ಬಿ)(೨)(ಬಿ) ಪ್ರಕರಣದಲ್ಲಿ ಆರೋಪಿ ಎ೪ ಆದಿಲ್ ಬಾಷಾನನ್ನು ಬಂಧಿಸಲು ವಾರೆಂಟ್ ಹೊರಡಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಉಪನಿರೀಕ್ಷಕ ರಮೇಶ್‌ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಹಸ್ತಾಂತರ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.