ಭದ್ರಾವತಿ: ತಾಲ್ಲೂಕಿನ ರಬ್ಬರ್ ಕಾಡು ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ ಜಗಳ ಬಿಡಿಸಲು ಹೋದ ಹೆಡ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆದಿದೆ.
ಗ್ರಾಮದ ಕನಕ ಯುವಕರ ಸಂಘದ ಗಣಪತಿ ವಿಸರ್ಜನೆ ವೇಳೆ ಗ್ರಾ.ಪಂ ಮಾಜಿ ಅಧ್ಯಕ್ಷ ಕೃಷ್ಣೇಗೌಡ ಅವರ ಮನೆಯ ಮುಂದೆ ಗಲಾಟೆಯಾಗಿದೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೃಷ್ಣೇಗೌಡ ಮತ್ತು ಅವರ ಪತ್ನಿ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಈ ವೇಳೆ ಗಲಾಟೆಯನ್ನು ಬಿಡಿಸಲು ಹೋದ ಪೇಪರ್ ಟೌನ್ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೆಬಲ್ ಯಲ್ಲಪ್ಪ ಅವರ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ.
ಗಾಯಗೊಂಡ ಯಲ್ಲಪ್ಪ ಮತ್ತು ಕೃಷ್ಣೇಗೌಡ ಅವರು ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.