ಭದ್ರಾವತಿ: ನಟ ದಿವಂಗತ ಪುನೀತ್ ರಾಜಕುಮಾರ್ ನಾಡಿನ ಸಾಂಸ್ಕೃತಿಕ ನಾಯಕ ಎಂದು ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಬಣ್ಣಿಸಿದರು.
ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ನಗರದ ನ್ಯೂ ಟೌನ್ ಅಯ್ಯಪ್ಪ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್ ರಾಜಕುಮಾರ್ 50ನೇ ವರ್ಷದ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜ ವಿಕ್ರಂ, ಹಿರಿಯ ಕಲಾವಿದ ಜೆ.ಪಿ.ನಂಜುಂಡೇಗೌಡ ಹಾಗೂ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಎನ್.ದೇವರಾಜ್ ಮಾತನಾಡಿದರು.
ದೈಹಿಕ ಶಿಕ್ಷಣ ನಿವೃತ್ತ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ.ಹನುಮಂತಯ್ಯ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಪದಾಧಿಕಾರಿಗಳು, ಕಲಾವಿದರು ಪಾಲ್ಗೊಂಡಿದ್ದರು. ಕಲಾವಿದರು ಪುನೀತ್ ರಾಜಕುಮಾರ್ ಚಲನಚಿತ್ರಗಳ ಗೀತೆಗಳನ್ನು ಹಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.