ಶಿವಮೊಗ್ಗ: ಭದ್ರಾವತಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವೇಳೆ ಪಕ್ಷದ ವಿಪ್ ಉಲ್ಲಂಘನೆ ಆರೋಪದ ಮೇಲೆ ವಾರದ ಹಿಂದೆ ಉಚ್ಛಾಟನೆಗೊಂಡಿದ್ದ ಮೂವರು ಬಿಜೆಪಿ ಸದಸ್ಯರು ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಹಾಜರಿದ್ದರು.
ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷರೂ ಆಗಿದ್ದ ನಗರಸಭೆ ಸದಸ್ಯ ವಿ.ಕದಿರೇಶ್ ಹಾಗೂ ಅವರ ಪುತ್ರ, ಬಿಜೆಪಿ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್, ನಗರಸಭೆ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ ಅವರೂ ಕಾಂಗ್ರೆಸ್ ಸೇರ್ಪಡೆಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.