ADVERTISEMENT

ಭದ್ರಾವತಿ | ವಿ.ಐ.ಎಸ್.ಎಲ್ ಕಾರ್ಖಾನೆ: ಪರಿಸರ ದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 14:03 IST
Last Updated 19 ಜೂನ್ 2025, 14:03 IST
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಲಾಯಿತು
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಲಾಯಿತು   

ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಸುಮಾರು 4,000 ಸಸಿಗಳನ್ನು ವಿತರಿಸಲಾಯಿತು.

ಸಾಮಾಜಿಕ ಕಾರ್ಯ ಯೋಜನೆಯಡಿ ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಡುವುದನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಕಾರ್ಖಾನೆ ಹೊಂದಿದೆ. ಮನೆಗಳಿಗೆ ಉಪಯುಕ್ತ ಕರಿಬೇವು, ಹಲಸು, ಪಪ್ಪಾಯ, ನುಗ್ಗೆ ಸೇರಿದಂತೆ ಹಲವು ರೀತಿಯ ಸಸಿಗಳನ್ನು ಬೆಳೆಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಲ್.ಚಂದ್ವಾನಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಎಲ್.ಪ್ರವೀಣ್ ಕುಮಾರ್ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಗುರಿ ಮೀರಿ ಸಸಿಗಳನ್ನು ವಿತರಿಸಲಾಗಿದೆ. ಸಸಿ ವಿತರಣೆ ಕಾರ್ಯ ಮುಂದುವರಿಯಲಿದೆ. ಸಭೆ, ಸಮಾರಂಭ, ರಾಷ್ಟ್ರೀಯ ಹಬ್ಬಗಳ ಆಚರಣೆ ಸೇರಿದಂತೆ ಇನ್ನಿತರ ವಿಶೇಷ ದಿನಗಳಂದು ಸಸಿಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.