ADVERTISEMENT

ಸರಳವಾಗಿ ಭಗೀರಥ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2019, 13:29 IST
Last Updated 11 ಮೇ 2019, 13:29 IST
ಶಿವಮೊಗ್ಗದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಉಪ್ಪಾರ ಸಮಾಜ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಶಿವಮೊಗ್ಗದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಉಪ್ಪಾರ ಸಮಾಜ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಗಣ್ಯರು ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಜಿಲ್ಲಾ ಉಪ್ಪಾರ ಸಮಾಜದ ವತಿಯಿಂದ ಭಗೀರಥ ಮಹರ್ಷಿಗಳ ಜಯಂತಿ ಕಾರ್ಯಕ್ರಮವನ್ನು ಶನಿವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಡಿ.ಆರ್.ರೇಖಾ ಉಮೇಶ್, ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್‌.ಮಂಜುನಾಥ್, ಉಪ್ಪಾರ ಸಹಕಾರ ಸಂಘದ ಅಧ್ಯಕ್ಷ ಕೆ.ದೇವೇಂದ್ರಪ್ಪ, ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಸದಸ್ಯ ಬೊಮ್ಮನಕಟ್ಟೆ ಮಂಜುನಾಥ್ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಉಪ್ಪಾರ ಸಮಾಜದಿಂದ ಗೋಪಿ ವೃತ್ತದಲ್ಲಿ ಸಾರ್ವಜನಿಕರಿಗೆ ಉಚಿತ ಮಜ್ಜಿಗೆ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.