ADVERTISEMENT

ಶಿವಮೊಗ್ಗ: ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಅವಿಶ್ವಾಸಕ್ಕಿಲ್ಲ ಬೆಂಬಲ: ಟಿ.ಡಿ.ಮೇಘರಾಜ್

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 13 ಮೇ 2020, 15:11 IST
Last Updated 13 ಮೇ 2020, 15:11 IST

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದ್ದಾರೆ. ಅವರ ಪಕ್ಷದ ಸದಸ್ಯರೇ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದಾರೆ. ಸಂಪೂರ್ಣ ಅವಕಾಶ ಸಿಕ್ಕರೆ ಮಾತ್ರ ಪಕ್ಷ ಅಧಿಕಾರ ಗದ್ದುಗೆ ಹಿಡಿಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.

ಜಿಲ್ಲಾ ಪಂಚಾಯತಿಯಲ್ಲಿಕಾಂಗ್ರೆಸ್‌, ಜೆಡಿಎಸ್ ಮೈತ್ರಿಕೂಟ ಅಧಿಕಾರದಲ್ಲಿದೆ.ಅಧ್ಯಕ್ಷ-ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ ನಡೆದಿದೆ. ಈ ಅವಿಶ್ವಾಸ ನಿರ್ಣಯವನ್ನುಬಿಜೆಪಿ ಬೆಂಬಲಿಸುವುದಿಲ್ಲ. ಅವಿಶ್ವಾಸ ಮಂಡಿಸಲು 31 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿಅವಿಶ್ವಾಸ ಮಂಡಿಸಲು ಮೂರನೇಎರಡರಷ್ಟು ಸದಸ್ಯರ ಆವಶ್ಯಕತೆ ಇದೆ. ಆಡಳಿತ ಪಕ್ಷಕ್ಕೆ ಅಷ್ಟು ಸ್ಥಾನಗಳಿಲ್ಲ. ಹಾಗಾಗಿ, ಬಿಜೆಪಿ ಬೆಂಬಲ ನೀಡುವುದಿಲ್ಲ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಆಡಳಿತ ನಡೆಸುವಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರು ಸಂಪೂರ್ಣ ವಿಫಲರಾಗಿದ್ದಾರೆ. ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ,ರಕ್ಷಣಾ ಇಲಾಖೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಜಿಲ್ಲಾ ಪಂಚಾಯಿತಿತನ್ನ ಕರ್ತವ್ಯ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದುದೂರಿದರು.

ADVERTISEMENT

ಲಾಕ್ ಡೌನ್‌ಗೂ ಮೊದಲೇಎರಡು ತಿಂಗಳು ಸಭೆ ನಡೆಸಿಲ್ಲ.ಕೆಲವೆಡೆ ತುರ್ತು ಸಭೆಗಳನ್ನ ಜಿಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಆ್ಯಪ್‌ಮೂಲಕ,ವೀಡಿಯೊ ಸಂಭಾಷಣೆಮೂಲಕನಡೆಸಿ, ಅಗತ್ಯ ನಿರ್ಣಯ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಅಂತಹ ಪ್ರಯತ್ನಗಳೇ ನಡೆದಿಲ್ಲ. ಕುಡಿಯುವ ನೀರಿನ ವಿಷಯದಲ್ಲೂ ಶ್ರಮವಹಿಸಿಲ್ಲ. ಟಾಸ್ಕ್ ಫೋರ್ಸ್ ಮೇಲೆ ಯಾವ ಕಾರ್ಯಕ್ರಮ ನಡೆಯಬೇಕು ಎಂದುನಿರ್ಣಯಿಸಿಲ್ಲ. ಉಪಾಧ್ಯಕ್ಷೆ,ಅಧ್ಯಕ್ಷರ ಮಧ್ಯೆ ಹೊಂದಾಣಿಕೆ ಇಲ್ಲ. ನರೇಗಾ ನಿರ್ವಹಣೆಯಲ್ಲೂ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾದ ಸಂಕಷ್ಟದಲ್ಲಿರುವ ಜನರಿಗೆ,ಉದ್ಯಮಿಗಳಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದು ಆ ಸಮುದಾಯಗಳ ಬಗ್ಗೆ ಮೋದಿಅವರಿಗೆ ಇರುವಕಾಳಜಿ ತೋರಿಸುತ್ತದೆ. ಆದರೆ, ಕೆಲವರು ಅನಗತ್ಯವಾಗಿ ಮೋದಿ ಟೀಕಿಸುತ್ತಿದ್ದಾರೆ. ಇದು ಸರಿಯಲ್ಲ. ಮೋದಿ ಪ್ಯಾಕೇಜ್ ಘೋಷಿಸುವ ಮೂಲಕ ಇವರೆಲ್ಲರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷಡಿ.ಎಸ್.ಅರುಣ್, ಪಾಲಿಕೆ ಸದಸ್ಯರಾದ ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಕೆ.ವಿ.ಅಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.