ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜುಲೈ 9 ಅಥವಾ 10ರಂದು ವಿದೇಶ ಪ್ರವಾಸದಿಂದ ವಾಪಸಾಗಲಿದ್ದಾರೆ. ನಂತರವೇ ಅವರೊಂದಿಗೆ ಚರ್ಚೆ ನಡೆದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸ್ಪಷ್ಟನೆ ದೊರೆಯಲಿದೆ.
ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಕುರಿತಂತೆ ಈಗಿನ ವಿಚಾರಗಳೆಲ್ಲವೂ ಮಾಧ್ಯಮಗಳಲ್ಲಿನ ಚರ್ಚೆಯಷ್ಟೇ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.