ಸಾಗರ: ‘ಧರ್ಮಸ್ಥಳ ರಕ್ಷಿಸಿ, ಹಿಂದೂ ಧರ್ಮ ಉಳಿಸಿ’ ಘೋಷವಾಕ್ಯದೊಂದಿಗೆ ಸೆ. 1ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಸ್ಥೈರ್ಯ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಳಿಗ್ಗೆ 10ಕ್ಕೆ ಸಾಗರದಿಂದ ಅಂದಾಜು 100 ವಾಹನಗಳಲ್ಲಿ 500ಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಶಿಕಾರಿಪುರದಿಂದ 200 ಬಸ್‌ನಲ್ಲಿ ಜನರು ಹೋಗುತ್ತಿದ್ದಾರೆ ಎಂದರು.
‘ಧರ್ಮಸ್ಥಳದಲ್ಲಿ ಮಧ್ಯಾಹ್ನ 2ಕ್ಕೆ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿರುವ ಹಿಂದೂ ಧರ್ಮ ಉಳಿಸಿ, ಧರ್ಮಸ್ಥಳ ರಕ್ಷಿಸಿ ಬೃಹತ್ ಸಮಾವೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಿಂದಲೂ ಕನಿಷ್ಠ 500 ಜನರು ಪಾಲ್ಗೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಉಪಾಧ್ಯಕ್ಷೆ ಸವಿತಾ ವಾಸು, ಸದಸ್ಯರಾದ ಟಿ.ಡಿ.ಮೇಘರಾಜ್, ದೇವೇಂದ್ರಪ್ಪ, ಗಣೇಶ ಪ್ರಸಾದ್, ಗೋಪಾಲ ಕಂಬಳಿಕೊಪ್ಪ, ಬಿ.ಟಿ.ರವೀಂದ್ರ, ರಾಯಲ್ ಸಂತೋಷ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.