ADVERTISEMENT

ರಕ್ತದಾನ ಮಹಾದಾನ: ಟಿ.ಡಿ.ತಿಮ್ಮಪ್ಪ

ಸಹ್ಯಾದ್ರಿ ಕಾಲೇಜು: ರಕ್ತದಾನ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 4:08 IST
Last Updated 4 ಮಾರ್ಚ್ 2026, 4:08 IST
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರದ ನೋಟ
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆದ ರಕ್ತದಾನ ಶಿಬಿರದ ನೋಟ   

ಶಿವಮೊಗ್ಗ: ಜೀವಮಾನದಲ್ಲಿಯೇ ಅತ್ಯಂತ ಶ್ರೇಷ್ಠವಾದ ದಾನ ರಕ್ತದಾನ ಎಂದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಟಿ.ಡಿ.ತಿಮ್ಮಪ್ಪ ಅಭಿಪ್ರಾಯಪಟ್ಟರು. 

ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ವಿವಿಧ ಘಟಕಗಳ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

‘ರಕ್ತದಾನದಿಂದ ಮತ್ತೊಂದು ಜೀವ ಉಳಿಯುತ್ತದೆ. ಇದೊಂದು ಪುಣ್ಯ ಕಾರ್ಯ. ರಕ್ತದಾನಿಗಳಿಗೆ ಆತ್ಮತೃಪ್ತಿ ತಂದುಕೊಡುತ್ತದೆ. ಒಬ್ಬ ವ್ಯಕ್ತಿ ಮಾಡುವ ರಕ್ತದಾನ ಅನೇಕ ವ್ಯಕ್ತಿಗಳನ್ನು ಪ್ರಾಣಾಪಾಯದಿಂದ ಪಾರು ಮಾಡುತ್ತದೆ. ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕ ಸಂಗತಿ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಕಾಲೇಜಿನ ಪ್ರಾಚಾರ್ಯ ಟಿ.ಅವಿನಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶ ನೀಡುವ ಸಂಗತಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.

ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಮೇಲ್ವಿಚಾರಕರಾದ ಶೇಷಮ್ಮ, ಎಚ್‌ಡಿಎಫ್‌ಸಿ ಬ್ಯಾಂಕ್‌ನ ಕ್ಲಸ್ಟರ್ ಹೆಡ್ ಶಿವಾನಂದ ಮೂಡ್ವಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಕೆ.ವಿ. ಗಿರಿಧರ್, ಯುವರ್ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಬಾಲಸ್ವಾಮಿ, ಎನ್‌ಸಿಸಿ ಅಧಿಕಾರಿ ಡಾ. ಶಶಿರಾಜ್, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಪ್ರಕಾಶ್ ಮರ್ಗನಳ್ಳಿ, ರೋವರ್ಸ್ ಸಂಚಾಲಕರಾದ ಡಾ. ಶಿವಕುಮಾರ್, ರೇಂಜರ್ಸ್ ಸಂಚಾಲಕರಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.