ADVERTISEMENT

ಕ್ರೀಡೆಯಿಂದ ದೇಹ, ಮನಸ್ಸು ಸದೃಢ: ಕೆ.ಬಿ. ಪ್ರಸನ್ನಕುಮಾರ್

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 3:55 IST
Last Updated 14 ಆಗಸ್ಟ್ 2022, 3:55 IST
ಶಿವಮೊಗ್ಗದಲ್ಲಿ ಶನಿವಾರ ಓಪನ್ ಬ್ಯಾಡ್ಮಿಂಟನ್ ಟೂರ್ನಿ ನಡೆಯಿತು
ಶಿವಮೊಗ್ಗದಲ್ಲಿ ಶನಿವಾರ ಓಪನ್ ಬ್ಯಾಡ್ಮಿಂಟನ್ ಟೂರ್ನಿ ನಡೆಯಿತು   

ಶಿವಮೊಗ್ಗ: ಕ್ರೀಡೆಯಿಂದ ದೇಹ, ಮನಸ್ಸು ಸದೃಢವಾಗುವುದರ ಜೊತೆಗೆ ಖಿನ್ನತೆ ದೂರವಾಗುತ್ತದೆ. ಬಾಲ್ಯದಲ್ಲೇ ಮಕ್ಕಳಿಗೆ ಕ್ರೀಡೆ ಬಗ್ಗೆ ಆಸಕ್ತಿಯನ್ನು ಬೆಳಸಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಶನಿವಾರ ಸ್ನೇಹಮಹಿ ಸಂಘದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರ ಜಿಲ್ಲಾ ಓಪನ್ ಬ್ಯಾಡ್ಮಿಂಟನ್ ಕಪ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

‘ರೋವರ್ಸ್ ಕ್ಲಬ್ ಈಗಾಗಲೇ ಇಂತಹ ಕ್ರೀಡೆಗಳಿಗೆ ಸಹಕಾರ ನೀಡುತ್ತಾ ಬಂದಿದೆ. ಕ್ರೀಡೆ ಒಳ್ಳೆಯ ವಾತಾವರಣವನ್ನು ಸೃಷ್ಟಿ ಮಾಡುತ್ತದೆ. ಈಗಾಗಲೇ ಜಿಲ್ಲೆಯ ಸಾಕಷ್ಟು ಕ್ರೀಡಾಪಟುಗಳಿಗೆ ಸಹಕಾರ ನೀಡಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಸಹಕಾರ ನೀಡಿದ್ದೇವೆ’ ಎಂದುಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಹೇಳಿದರು.

ಕ್ರೀಡೆಯಿಂದ ವರ್ಷ ಕಾಮನ್ ವೆಲ್ತ್ ನಲ್ಲಿ ರಾಜ್ಯ ಹಾಗೂ ದೇಶದವರು ಅತಿ ಹೆಚ್ಚು ಪದಕಗಳನ್ನು ಗಳಿಸಿರುವುದು ಹೆಮ್ಮೆಯ ಸಂಗತಿ ಎಂದುಜಿಲ್ಲಾ ಸ್ಕೌಟ್ಸ್ ಗೈಡ್ಸ್ ಮುಖ್ಯ ಆಯುಕ್ತ ಎಚ್.ಡಿ. ರಮೇಶ್ ಶಾಸ್ತ್ರಿ ಹೇಳಿದರು.

ADVERTISEMENT

ಸಂಘದ ಅಧ್ಯಕ್ಷ ಎಸ್. ಚಿನ್ನಪ್ಪಅಧ್ಯಕ್ಷತೆ ವಹಿಸಿದ್ದರು.ಉಪ ಮೇಯರ್ ಶಂಕರ್ ಗನ್ನಿ, ರೋವರ್ಸ್ ಕ್ಲಬ್‌ನ ಉಪಾಧ್ಯಕ್ಷ ಕೆ. ರವಿ, ಖಜಾಂಚಿ ನಾಗರಾಜ್ ಪಾಟ್ಕರ್, ಜಿ. ವಿಜಯಕುಮಾರ್, ಎನ್. ರವಿಕುಮಾರ್, ಆ.ಮ. ಪ್ರಕಾಶ್, ವಿನಾಯಕ, ರಾಮು, ಎಂ.ಆರ್. ಬಸವರಾಜ್, ಸಹ ಕಾರ್ಯದರ್ಶಿ ಕೃಷ್ಣಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.