
ಸಾವು
(ಪ್ರಾತಿನಿಧಿಕ ಚಿತ್ರ)
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ಪಲ್ಟಿಯಾಗಿ ಮಂಗಳವಾರ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲ್ಲೂಕಿನ ದೊಡ್ಡೇರಿ ಸಮೀಪದ ನೆಟ್ಟಗಲಟ್ಟಿ ಗ್ರಾಮದ ಲಕ್ಷ್ಮಮ್ಮ (48) ಮೃತರು.
ಗಾಜನೂರು ಸಮೀಪದ ನರ್ಸರಿಯಲ್ಲಿ ಕೆಲಸ ಮುಗಿಸಿ ಬೊಲೆರೊ ವಾಹನದಲ್ಲಿ ಲಕ್ಷ್ಮಮ್ಮ ಸೇರಿದಂತೆ 14 ಮಂದಿ ಮನೆಗೆ ಮರಳುತ್ತಿದ್ದರು. ಭದ್ರಾವತಿಯ ಬಿಸಿಲುಮನೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಪಲ್ಟಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಲಕ್ಷ್ಮಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದಾರೆ ಎಂದು ತಿಳಿದುಬಂದಿದೆ.
ವಾಹನದಲಿದ್ದ ಎಲ್ಲರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಮ್ಮ ಅವರ ಮೃತದೇಹವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.