ADVERTISEMENT

ಕನ್ನಡ ಪುಸ್ತಕಗಳ ಮಾರಾಟ: ಶೇ 50 ರಿಯಾಯಿತಿ

-

​ಪ್ರಜಾವಾಣಿ ವಾರ್ತೆ
Published 31 ಜುಲೈ 2024, 15:24 IST
Last Updated 31 ಜುಲೈ 2024, 15:24 IST

ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ 50 ರಿಯಾಯಿತಿ ಲಭ್ಯವಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.