
ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಫೆ. 20, 21ರಂದು ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳೆ ಆಯೋಜಿಸಲಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜಕೀಯ ಜನ್ಮನೀಡಿದ ತಾಲ್ಲೂಕಿನ ಜನತೆಗೆ ಸೇವೆ ಸಲ್ಲಿಸುವ ಉದ್ದೇಶಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆಳ್ವಾಸ್ ಎಜುಕೇಶನ್ ಪೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ತಾಲ್ಲೂಕಿನ ಯುವಜನತೆಗೆ ಉದ್ಯೋಗ ಕಲ್ಪಿಸುವುದಕ್ಕೆ ಆದ್ಯತೆ ನೀಡಲಾಗುವುದು. ಈಗಾಗಲೆ ನೋಂದಣಿ ಆರಂಭಗೊAಡಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವರಿಗೆ ಅನುಕೂಲಕ ಕಲ್ಪಿಸುವ ಉದ್ದೇಶಕ್ಕಾಗಿ ಜ.17 ಮತ್ತು ಫೆ.7ರಂದು ಬೆಳಗ್ಗೆ 10ಗಂಟೆಗೆ ಶಿರಾಳಕೊಪ್ಪ ಸಮೀಪದ ನೇರಲಗಿ ಸಮುದಾಯ ಭವನದಲ್ಲಿ ಉಡುಗಣಿ, ತಾಳಗುಂದ ಹೋಬಳಿ ಯುವಜನತೆಗೆ ಮಾಹಿತಿ, ತರಬೇತಿ ಶಿಬಿರ ಮತ್ತು ಜ.24 ಫೆ.14 ರಂದು ಬೆಳಗ್ಗೆ 10ಗಂಟೆಗೆ ಮಂಗಳ ಭವನದಲ್ಲಿ ಹೊಸೂರು, ಅಂಜನಾಪುರ ಹೋಬಳಿ ಯುವಜನತೆಗೆ ಮಾಹಿತಿ, ತರಬೇತಿ ಶಿಬಿರ. ಮತ್ತು ಜ.31 ಫೆ.14 ರಂದು ಬೆಳಗ್ಗೆ 10ಗಂಟೆಗೆ ಮಂಗಳ ಭವನದಲ್ಲಿ ಕಸಬಾ ಹೋಬಳಿ, ಶಿಕಾರಿಪುರ ಪಟ್ಟಣದ ಯುವಜನತೆಗೆ ಮಾಹಿತಿ, ತರಬೇತಿ ಶಿಬಿರ ಆಯೋಜಿಸಲಾಗಿದೆ.
ಮೇಲ್ಕಂಡ ಶಿಬಿರದಲ್ಲಿ ಪಾಲ್ಗೊಂಡವರಿಗೆ ಮೇಳದಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಳ್ಳುವುದಕ್ಕೆ ಸಹಕಾರಿ ಆಗಲಿದೆ ಎಂದು ಆಳ್ವಾಸ್ ಎಜುಕೇಶನ್ ಪೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.
ಆಳ್ವಾಸ್ ಎಜುಕೇಶನ್ ಪೌಂಡೇಶನ್‌ನ ಶ್ರೀನಿವಾಸ್, ಪುನಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.