ಶಿಕಾರಿಪುರ: ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳದಾಳಿಯನ್ನು ರಾಜಕೀಯಕ್ಕೆ ಲಿಂಕ್ ಮಾಡುವುದಿಲ್ಲ. ಚುನಾವಣೆ ಬೇರೆ ಐಟಿ ದಾಳಿ ಬೇರೆ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಆಪ್ತ ಉಮೇಶ ಮನೆ ಮೇಲೆಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಸಂಬಂಧ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
‘ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಮೇಶ್ ನನ್ನ ಜತೆ ಕೆಲಸ ಮಾಡಿದ್ದರು. ಉಮೇಶ್ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ವಾಸ್ತವದ ಸತ್ಯ ಸಂಗತಿಗಳು ನಾಳೆ ಬಹಿರಂಗಗೊಳ್ಳುತ್ತದೆ. ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ಐಟಿ ದಾಳಿಗಳು ಸಾಮಾನ್ಯವಾಗಿ ನಡೆಯುತ್ತದೆ. ಅದೇ ರೀತಿ ಉಮೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ’ ಎಂದರು.
‘ಯಾರೇ ತಪ್ಪು ಮಾಡಿದರೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾನೂನಿನಂತೆ ಕ್ರಮ ಕೈಗೊಳ್ಳುತ್ತಾರೆ’ ಎಂದ ಅವರು,
‘ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.