ADVERTISEMENT

ರಾಮ ಮಂದಿರ ಕುರಿತ ಸಿದ್ದರಾಮಯ್ಯ ಹೇಳಿಕೆ ಸುಪ್ರೀಂ ತೀರ್ಪಿಗೆ ವಿರುದ್ಧ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 7:06 IST
Last Updated 17 ಫೆಬ್ರುವರಿ 2021, 7:06 IST
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಭವನಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಭವನಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.   

ಶಿವಮೊಗ್ಗ: ರಾಮ ಮಂದಿರ ನಿರ್ಮಾಣ ಕುರಿತು ವಿಧಾನಸಭೆ ವಿರೊಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಕೋರ್ಟ್ ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತಮಹೋತ್ಸವ ಭವನಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಹಿಂದೂ, ಮುಸ್ಮಿಂ, ಕ್ರೈಸ್ತರು ಸೇರಿದಂತೆ ಮಂದಿರ ನಿರ್ಮಾಣಕ್ಕೆ ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ಅದನ್ನು ಸಹಿಸದೇ ಕೆಲವರು ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಟೀಕೆ ಮಾಡುತ್ತಾ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಯಡಿಯೂಪ್ಪಗೆ ಸಂಗಮೇಶ್ವರ ಹೊಗಳಿಕೆ
ಶಿವಮೊಗ್ಗ:
ಜಿಲ್ಲೆಯ ಅಭಿವೃದ್ದಿಯ ಹರಿಕಾರ ಬಿ.ಎಸ್.ಯಡಿಯೂರಪ್ಪ.‌ ಅಭಿವೃದ್ಧಿ ವಿಷಯದಲ್ಲಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಹಿಂದೆ ಇದ್ದ ಜಿಲ್ಲೆಯ ಮುಖ್ಯಮಂತ್ರಿಗಳು ಜೀರೊ ಎನ್ನುವ ಮೂಲಕ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಮುಖ್ಯಮಂತ್ರಿಯನ್ನು ಹಾಡಿಹೊಗಳಿದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತಮಹೋತ್ಸವ ಭವನಕ್ಕೆ ಶಂಕುಸ್ಥಾಪನೆ ‌ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಎಂಪಿಎಂ, ವಿಐಎಸ್ಎಲ್ ಪುನಃಶ್ಚೇತನಕ್ಕೆ ಕ್ರಮಕೈಗೊಳ್ಳಬೇಕು. ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.