ಸಾಗರ: ಇಲ್ಲಿನ ಬಿಎಸ್ಎನ್ಎಲ್ ಕಚೇರಿಯಲ್ಲಿ ಸಿಬ್ಬಂದಿ ಕನ್ನಡದಲ್ಲಿ ವ್ಯವಹರಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಬಿಎಸ್ಎನ್ಎಲ್ ಅಧಿಕಾರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಬರೂರು ಗ್ರಾಮಕ್ಕೆ ಬಿಎಸ್ಎನ್ಎಲ್ ಟವರ್ ಮಂಜೂರು ಮಾಡುವಂತೆ ಒತ್ತಾಯಿಸಿ ಸಂಘಟನೆ ಪ್ರಮುಖರು ಮನವಿ ಸಲ್ಲಿಸಲು ಹೋದಾಗ ಸಿಬ್ಬಂದಿ ಸತೀಶ್, ಹರ್ಷವರ್ಧನ್ ಕನ್ನಡದಲ್ಲಿ ಮಾತನಾಡಿದರೆ ಅವಮಾನ ಎನ್ನುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಕಾರ್ಯಕರ್ತರು ದೂರಿದರು.
ಕನ್ನಡ ವಿರೋಧಿ ಧೋರಣೆ ತೋರುತ್ತಿರುವ ಬಿಎಸ್ಎನ್ಎಲ್ ನೌಕರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಮನೋಜ್ ಕುಗ್ವೆ, ನಾಗಭೂಷಣ್, ಅಖಿಲೇಶ್, ಷಣ್ಮುಖ ಕೆಂಚಾಳಸರ, ಪ್ರಕಾಶ್ ಎಚ್.ಎಂ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.