ADVERTISEMENT

ಸರ್ಕಾರವೇ ನಿಷ್ಕ್ರಿಯ; ಸಂಪುಟ ವಿಸ್ತರಣೆ ಅಪ್ರಸ್ತುತ

ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಟೀಕೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2018, 14:13 IST
Last Updated 6 ಅಕ್ಟೋಬರ್ 2018, 14:13 IST
ದಸರಾ ಉತ್ಸವ ನಡೆಯುವ ಶಿವಮೊಗ್ಗ ಹಳೇ ಜೈಲು ಜಾಗವನ್ನು ಶನಿವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ವೀಕ್ಷಿಸಿದರು.
ದಸರಾ ಉತ್ಸವ ನಡೆಯುವ ಶಿವಮೊಗ್ಗ ಹಳೇ ಜೈಲು ಜಾಗವನ್ನು ಶನಿವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ವೀಕ್ಷಿಸಿದರು.   

ಶಿವಮೊಗ್ಗ:ರಾಜ್ಯದಲ್ಲಿ ಸರ್ಕಾರವೇ ಸಂಪೂರ್ಣ ನಿಷ್ಕ್ರಿಯವಾಗಿರುವಾಗ ಸಂಪುಟ ವಿಸ್ತರಣೆ ವಿಚಾರ ಅಪ್ರಸ್ತುತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಕುಟುಕಿದರು.

ಹಳೇ ಕಾರಾಗೃಹ ಮೈದಾನದಲ್ಲಿ ದಸರಾ ಮಹೋತ್ಸವ ಆಚರಣೆಯ ಸ್ಥಳ ಪರಿಶೀಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ. ಸಂಗ್ರಹವಾದ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎನ್ನುವುದೇ ಯಕ್ಷಪ್ರಶ್ನೆಯಾಗಿದೆ. ಸಾಲ ಮನ್ನಾದ ವಿಷಯದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರೈತರ ಮೂಗಿಗೆ ತುಪ್ಪ ಹಚ್ಚಿದ್ದಾರೆ. ದಿನಕ್ಕೊಂದು ನಿಯಮ ರೂಪಿಸುತ್ತಾ ರೈತರ ದಾರಿ ತಪ್ಪಿಸುತ್ತಿದ್ದಾರೆ. ಸಹಕಾರಿ ಸಂಸ್ಥೆಗಳಿಗೂ ಸ್ಪಷ್ಟ ನಿರ್ದೇಶನ ನೀಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸೂಚನೆ ನೀಡಿಲ್ಲ. ಈಗಲೂ ರೈತರಿಗೆ ನೋಟಿಸ್ ನೀಡುತ್ತಲೇ ಇವೆ ಎಂದು ಹರಿಹಾಯ್ದರು.

ADVERTISEMENT

ಹಳೇ ಜೈಲು ಜಾಗ ಪೊಲೀಸ್‌ ಸಪರ್ದಿಗೆ ನೀಡಬಾರದು. ಸಾರ್ವಜನಿಕರ ಬಳಕೆಗೆ ನೀಡಬೇಕು. ತಾವು ಮುಖ್ಯಮಂತ್ರಿಯಾಗಿದ್ದಾಗ ಅದಕ್ಕಾಗಿಯೇ ನಗರದ ಹೊರಗೆ ಸ್ಥಳಾಂತರಿಸಲು ಕ್ರಮ ಕೈಗೊಂಡಿದ್ದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಭಿನವ್ ಖರೆ, ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಮಾಜಿ ಶಾಸಕ ಬಿ.ವೈ. ರಾಘವೇಂದ್ರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ರುದ್ರೇಗೌಡ, ಪಾಲಿಕೆ ಸದಸ್ಯರಾದ ಎಸ್‌.ಎನ್‌. ಚನ್ನಬಸಪ್ಪ, ಅನಿತಾ ರವಿಂಶಕರ್, ಜಿಲ್ಲಾ ಪಂಚಾಯಿತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ಮುಖಂಡರಾದ ಡಿ.ಎಸ್. ಅರುಣ್, ಪುರುಷೊತ್ತಮ್, ಮಾಲತೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.