ಶಿವಮೊಗ್ಗ: ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಶಿಕಾರಿಪುರ ಠಾಣೆ ಪೊಲೀಸರು ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ.
ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳುವಾಗಿರುವ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಳ್ಳಲಾಗಿತ್ತು.
ಕಳವು ಮಾಲು ಪತ್ತೆಗೆ ಶಿಕಾರಿಪುರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಎಂ. ಪಾಟೀಲ್ ನೇತೃತ್ವದಲ್ಲಿ ಪಿಎಸ್‌ಐ ಪಿ.ಎಸ್. ಶರತ್ ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಸುಳಿವಿನ ಮೇರೆಗೆ ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.