ಬಾಳೂರು (ರಿಪ್ಪನ್‌ಪೇಟೆ): ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಮಟೆಕೊಪ್ಪದ (ಚಂದಾಳದಿಂಬ) ಈಶ್ವರ್ ಸಿಂಗ್ ಎಂಬುವವರು ಸಂಗ್ರಹಿಸಿಟ್ಟಿದ್ದ ಹುಲ್ಲಿನ ಬಣವೆಗೆ ಶನಿವಾರ ಸಂಜೆ ಸಿಡಿಲು ಬಡಿದು ಸಂಪೂರ್ಣ ಸುಟ್ಟಿದೆ.
₹ 30 ಸಾವಿರಕ್ಕೂ ಅಧಿಕ ಮೌಲ್ಯದ ಮೇವು ಭಸ್ಮವಾಗಿದೆ ಎಂದುಈಶ್ವರ್ ಸಿಂಗ್ ತಿಳಿಸಿದ್ದಾರೆ.
ಭಾನುವಾರ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೀರೇಶ್ ಆಲವಳ್ಳಿ ಭೇಟಿ ನೀಡಿ, ‘ಕಂದಾಯ ಇಲಾಖೆ, ಕೃಷಿ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಪರಿಹಾರ ವಿತರಿಸಲು ಕ್ರಮವಹಿಸಬೇಕು’ ಎಂದು ತಿಳಿಸಿದರು.
ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ, ಸದಸ್ಯರಾದ ಶಶಿಕಲಾ, ಪಾರ್ವತಮ್ಮ, ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ್, ಸುರೇಶ್ ಸಿಂಗ್, ರಾಜೇಂದ್ರ ಘಂಟೆ ಅವರೂ ಈ ಸಂದರ್ಭದಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.