
ಹೊಸನಗರ: ತಾಲ್ಲೂಕಿನ ಹುಲಿಕಲ್ ಘಾಟಿಯ ಮುಖ್ಯ ರಸ್ತೆಯ ಬಾಳೇಬರೆ ಫಾಲ್ಸ್ ಬಳಿ ಶನಿವಾರ ಮಧ್ಯಾಹ್ನ ದುರ್ಗಾಂಬ ಬಸ್ ಏಕಾಏಕಿಯಾಗಿ ಬೆಂಕಿಗಾಹುತಿಯಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ಕುಂದಾಪುರ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್ ಶನಿವಾರ ಮಧ್ಯಾಹ್ನ ಕುಂದಾಪುರದಿಂದ ಶಿವಮೊಗ್ಗಕ್ಕೆ ಹೊರಟಿದೆ. ಮಾರ್ಗ ಮಧ್ಯೆ ಹುಲಿಕಲ್ ಘಾಟಿಯಲ್ಲಿ ಬಸ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ನಿಲ್ಲಿಸಲಾಗಿದ್ದು, ಚಾಲಕ, ನಿರ್ವಾಹಕ ಮತ್ತು ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಕ್ಷಣಾರ್ಧದಲ್ಲಿಯೇ ಬೆಂಕಿ ಹೊತ್ತಿ ಉರಿದು ಇಡಿ ಬಸ್ ಅನ್ನು ವ್ಯಾಪಿಸಿತು. ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈ ಗೊಂಡಿದ್ದರು. ಬಸ್‌ನಲ್ಲಿ 38 ಪ್ರಯಾಣಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.