ADVERTISEMENT

ನೆಟ್‌ವರ್ಕ್‌ ಸಮಸ್ಯೆ ತ್ವರಿತ ಇತ್ಯರ್ಥಕ್ಕೆ ಕ್ರಮ

ಮೊಬೈಲ್ ಕಂಪನಿಗಳು, ಬಿಎಸ್‌ಎನ್‌ಎಲ್‌ ಅಧಿಕಾರಿಗಳ ಜತೆ ಸಂಸದ, ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 13:57 IST
Last Updated 31 ಜುಲೈ 2021, 13:57 IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಮೊಬೈಲ್ ಕಂಪನಿಗಳು ಹಾಗೂ ಬಿಎಸ್‌ಎನ್‌ಎಲ್‌ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಮೊಬೈಲ್ ಕಂಪನಿಗಳು ಹಾಗೂ ಬಿಎಸ್‌ಎನ್‌ಎಲ್‌ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.   

ಶಿವಮೊಗ್ಗ:ಬೆಂಗಳೂರಿನಲ್ಲಿ ಶೀಘ್ರ ಮೊಬೈಲ್ ಕಂಪನಿಗಳ ಮುಖ್ಯಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು. ನೆಟ್‌ವರ್ಕ್‌ ಸಮಸ್ಯೆ ತ್ವರಿತ ಇತ್ಯರ್ಥಕ್ಕೆಸಂಸ್ಥೆಯ ಮುಖ್ಯಸ್ಥರಿಗೆ ಸೂಚಿಸಲಾಗುವುದು ಎಂದುಸಂಸದ ಬಿ.ವೈ.ರಾಘವೇಂದ್ರಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ವಿವಿಧ ಮೊಬೈಲ್ ಕಂಪನಿಗಳುಹಾಗೂ ಬಿಎಸ್‌ಎನ್‌ಎಲ್‌ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಇಂಟರ್‌ನೆಟ್‌ಹಾಗೂ ಮೊಬೈಲ್ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.ಸಕಾಲದಲ್ಲಿ ಟವರ್‌ಗಳನ್ನುನಿರ್ಮಿಸಿ, ಉತ್ತಮ ಸೇವೆ ನೀಡಲಾಗುವುದು ಎಂದರು.

ADVERTISEMENT

ಬಿಎಸ್‌ಎನ್‌ಎಲ್‌ಸಂಪರ್ಕವಿರುವಹಲವುಕಡೆ ವಿದ್ಯುತ್, ಜನರೇಟರ್, ಸಿಬ್ಬಂದಿ, ನಿರ್ವಹಣೆಕೊರತೆ ಇದೆ. ಇಂತಹ ಸ್ಥಿತಿಯಲ್ಲಿಉತ್ತಮ ಸೇವೆ ನಿರೀಕ್ಷಿಸುವುದು ಕಷ್ಟ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕೂಡಲೇ ಉತ್ತಮ ಸೇವೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ವಿಭಾಗೀಯ ವ್ಯವಸ್ಥಾಪಕ ವೆಂಕಟೇಶ್ ಅವರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಟವರ್‌ ನಿರ್ಮಿಸಲುಖಾಸಗಿ ಕಂಪನಿಗಳಿಗೆ ಪ್ರದೇಶಗಳ ವಿಂಗಡಣೆಮಾಡಲಾಗಿದೆ. ಇದರಿಂದ ಶೇ 80ರಷ್ಟು ಪ್ರದೇಶಕ್ಕೆ ಇಂಟರ್‌ನೆಟ್‌ಸಂಪರ್ಕ ಕಲ್ಪಿಸಲು ಸಾಧ್ಯವಾಗಿದೆ. ಉಳಿದ ಶೇ 20ರಷ್ಟು ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲು ಒತ್ತಾಯಿಸಲಾಗುವುದು. ಉಳಿದಟವರ್‌ಗಳನಿರ್ಮಾಣ ಕಾರ್ಯ ತ್ವರಿತಗೊಳಿಸಲು ಸೂಚಿಸಲಾಗಿದೆ.ಆರ್‌ಆರ್‌ಎಚ್‌ಎಂಯೋಜನೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಅಂಚೆ ಕಚೇರಿಗಳು, ಆರೋಗ್ಯ ಕೇಂದ್ರಗಳು, ಗ್ರಾಮ ಪಂಚಾಯಿತಿ, ಶಾಲಾ-ಕಾಲೇಜುಗಳು ಸೇರಿದಂತೆಒಂದು ಸಾವಿರಭಾಗದಲ್ಲಿ ಉಚಿತ ಸಂಪರ್ಕ ಸೇವೆ ನೀಡಲಾಗುತ್ತಿದೆ. ದೂರದ ಪ್ರದೇಶಕ್ಕೆ ಅದು ಹೊಂದಿರುವ ಕಿ.ಮೀ.ಗಳ ಅಂತರದಲ್ಲಿ ಶುಲ್ಕ ನಿಗದಿಪಡಿಸಿ, ಸಂಪರ್ಕ ಕಲ್ಪಿಸಲು ಕ್ರಮವಹಿಸಲಾಗಿದೆ. ಮಕ್ಕಳ ಆನ್‍ಲೈನ್ ಕ್ಲಾಸ್‍ಗಳಿಗೆ ಅಡಚಣೆಯಾಗದಂತೆ ಅಗತ್ಯ ಸಾಮರ್ಥ್ಯದ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

‘ಸೂಡಾ’ ಅಧ್ಯಕ್ಷ ಎಸ್‌.ಎಸ್.ಜ್ಯೋತಿ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತಿಸಿಇಒಎಂ.ಎಲ್.ವೈಶಾಲಿ,ಹೆಚ್ಚುವರಿಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.