ಶಿಕಾರಿಪುರ: ಸಂವಿಧಾನ ಪೀಠಿಕೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಸಂವಿಧಾನ ರಚನೆ ಮಾಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನೇ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವರ ರಾಜಕೀಯ ಪ್ರಗತಿಗೆ ಅಡ್ಡಿಯಾದರು ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.
ತಾಲ್ಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ನಿಧನರಾದಾಗ ದೆಹಲಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೆ ಕಾಂಗ್ರೆಸ್ ಜಾಗ ನೀಡಲಿಲ್ಲ. ನರೇಂದ್ರ ಮೋದಿ ಅವರು ಅಂಬೇಡ್ಕರ್ ಸಮಾಧಿ ಸ್ಥಳ ಅಭಿವೃದ್ಧಿಪಡಿಸಿದರು. ಅವರು ಅಭ್ಯಾಸ ಮಾಡಿದ್ದ ಲಂಡನ್ ಕಟ್ಟಡ ಖರೀದಿಸಿ ಅಲ್ಲೊಂದು ಹಾಸ್ಟೆಲ್ ನಿರ್ಮಿಸಿದರು. ಹಿಂದುಳಿದ ವರ್ಗದ ಪರವಾದ ಬಿಜೆಪಿ ಕೆಲಸ ಮಾಡುತ್ತಿದೆ. ರಾಷ್ಟ್ರೀಯತೆ ಆಧಾರದ ಮೇಲೆ ಸ್ಥಾಪಿತವಾಗಿರುವ ಬಿಜೆಪಿ ದೇಶದ ಹಿತಕ್ಕಾಗಿ ಆಡಳಿತ ನಡೆಸುತ್ತಿದೆ ಎಂದರು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಗಾಯಿತ್ರಿದೇವಿ, ಪ್ರಧಾನ ಕಾರ್ಯದರ್ಶಿ ಮಂಗಳಾ, ರೈತ ಮೋರ್ಚಾ ಅಧ್ಯಕ್ಷ ನಿಂಬೆಗೊಂದಿ ಸಿದ್ಧಲಿಂಗಪ್ಪ, ಮುಖಂಡರಾದ ಕೆ.ಎಸ್.ಗುರುಮೂರ್ತಿ, ಹುಲ್ಮಾರ್ ಮಹೇಶ್, ರಾಮನಾಯ್ಕ, ಎಂ.ಬಿ.ಚನ್ನವೀರಪ್ಪ, ವಸಂತಗೌಡ, ಮಲ್ಲೇಶಪ್ಪ, ಬಸವರಾಜ್ ಕಪ್ಪನಹಳ್ಳೀ, ಬಂಗಾರಿನಾಯ್ಕ, ಶಾಂತಪ್ಪ, ವೀರನಗೌಡ, ಸುಧೀರ್, ವಿನಯ್, ಅನೂಪ್, ನಾಗಿಹಳ್ಳಿ ಗಣೇಶ್, ಲೋಹಿತ್‌ನಾಯ್ಕ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.