ADVERTISEMENT

ಅಡಿಕೆಗೆ ಎಲೆಚುಕ್ಕಿ ರೋಗ: ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 4:34 IST
Last Updated 5 ಅಕ್ಟೋಬರ್ 2021, 4:34 IST
ಆಗುಂಬೆ ಹೋಬಳಿಯ ಎಲೆಚುಕ್ಕಿ ರೋಗ ಬಾಧಿತ ಅಡಿಕೆ ತೋಟಕ್ಕೆ ಆರಗ ಜ್ಞಾನೇಂದ್ರ ಭೇಟಿ ನೀಡಿದರು
ಆಗುಂಬೆ ಹೋಬಳಿಯ ಎಲೆಚುಕ್ಕಿ ರೋಗ ಬಾಧಿತ ಅಡಿಕೆ ತೋಟಕ್ಕೆ ಆರಗ ಜ್ಞಾನೇಂದ್ರ ಭೇಟಿ ನೀಡಿದರು   

ತೀರ್ಥಹಳ್ಳಿ: ರೋಗ ನಿಯಂತ್ರಣದ ಕೃಷಿ ಔಷಧವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಸರ್ಕಾರದ ಗಮನಕ್ಕೆ ಬಂದಿದೆ. ನಿಯಂತ್ರಣ ಮಾಡದಿದ್ದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.

ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಇಳಿಮನೆ ಸೇರಿ ವಿವಿಧೆಡೆ ಎಲೆಚುಕ್ಕಿ ರೋಗ ಬಾಧಿತ ತೋಟಗಳಿಗೆ ಸೋಮವಾರ ಭೇಟಿ ನೀಡಿ ರೈತರು, ಅಧಿಕಾರಿಗಳೊಂದಿಗೆ ಚರ್ಚಿಸಿದರು.

‘ರೈತರೊಂದಿಗೆ ಸರ್ಕಾರ ಇದೆ. ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದೇನೆ. ರೋಗ ನಿಯಂತ್ರಣ ಔಷಧಗೆ ಸರ್ಕಾರದ ಸಹಾಯಧನ ನೀಡಲು ಚರ್ಚೆ ನಡೆಯುತ್ತಿದೆ’ ಎಂದು ಹೇಳಿದರು.

ADVERTISEMENT

ಎಲೆಚುಕ್ಕಿ ರೋಗ ವ್ಯಾಪಕವಾಗಿ ಹರಡಲು ಕಾರಣವಾದ ಅಂಶಗಳ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯ ಇದೆ. ರೈತರು ಧೃತಿಗೆಡದೆ ರೋಗ ನಿಯಂತ್ರಣದ ಕಡೆ ನಿಗಾವಹಿಸಬೇಕು. ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಕೃಷಿ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.