ADVERTISEMENT

ಶಿವಮೊಗ್ಗ | ಸೆರೆ ಹಿಡಿದ ಚಿರತೆ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2022, 5:57 IST
Last Updated 26 ಜೂನ್ 2022, 5:57 IST
ಭದ್ರಾವತಿಯ ವಿಐಎಸ್ಎಲ್ ಕ್ವಾಟರ್ಸ್ ಬಳಿ ಬುಧವಾರ ಸೆರೆ ಹಿಡಿದಿದ್ದ ಚಿರತೆಯ‌ನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶಿವಮೊಗ್ಗ ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟರು.
ಭದ್ರಾವತಿಯ ವಿಐಎಸ್ಎಲ್ ಕ್ವಾಟರ್ಸ್ ಬಳಿ ಬುಧವಾರ ಸೆರೆ ಹಿಡಿದಿದ್ದ ಚಿರತೆಯ‌ನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶಿವಮೊಗ್ಗ ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟರು.   

ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕ್ವಾಟರ್ಸ್ ಬಳಿ ಬುಧವಾರ ಸೆರೆ ಹಿಡಿದಿದ್ದ ಚಿರತೆಯ‌ನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಮೀಪದ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.

ಭದ್ರಾವತಿಯ ವಿಐಎಸ್ಎಲ್ ಕ್ವಾಟರ್ಸ್ ಬಳಿ ಕಾಣಿಸಿಕೊಂಡಿದ್ದ ಚಿರತೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದಿದ್ದರು.

ನಂತರ ಚಿರತೆಯನ್ನು ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ತ್ಯಾ‌ವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ತೆಗೆದುಕೊಂಡು ಹೋಗಿ ಆರೋಗ್ಯ ತಪಾಸಣೆ ನಡೆಸಿದ್ದರು. ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಶುಕ್ರವಾರ ಸಂಜೆ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಕರೆದೊಯ್ದು ಬಿಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.