ADVERTISEMENT

ಸಾಗರ| ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಪಾರು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 6:16 IST
Last Updated 13 ಫೆಬ್ರುವರಿ 2023, 6:16 IST
ಸಾಗರ ನಗರದಲ್ಲಿ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ
ಸಾಗರ ನಗರದಲ್ಲಿ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ   

ನಗರದ ಎಲ್ಐಸಿ ಕಚೇರಿ ಮುಂಭಾಗ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಚಾಲಕ ಪಾರಾಗಿದ್ದಾರೆ.

ಸೊರಬ ತಾಲ್ಲೂಕಿನ ಉಳವಿಯ ವಿಜಯ್ ತಮ್ಮ ಕಾರಿನಲ್ಲಿ ಸಾಗರದಲ್ಲಿ ನಡೆಯುತ್ತಿರುವ ಮಾರಿಜಾತ್ರೆಗೆ ಹೊರಟ್ಟಿದ್ದರು.

ಬಿ.ಎಚ್.ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೆಂಕಿ ಕಾಣಸಿಕೊಂಡಿದೆ. ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವಿಜಯ್ ಕಾರಿನಿಂದ ಕೆಳಗೆ ಇಳಿದಿದ್ದಾರೆ.

ADVERTISEMENT

ಕಾರಿನ ಎಂಜಿನ್, ಬ್ಯಾಟರಿ ಹಾಗೂ ಕಾರಿನ ಮುಂಭಾಗ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಯಿಸಿ ಬೆಂಕಿ ನಿಯಂತ್ರಣಕ್ಕೆ ಶ್ರಮಪಟ್ಟರು. ಅವಘಡದಿಂದ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.