ADVERTISEMENT

ಸಾಗರ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು, ಇಬ್ಬರು ಅಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 3:04 IST
Last Updated 25 ಸೆಪ್ಟೆಂಬರ್ 2019, 3:04 IST
ಕಾರಿಗೆ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ.
ಕಾರಿಗೆ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ.   

ಶಿವಮೊಗ್ಗ:ಸಾಗರ ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಟವೆರಾ ಕಾರೊಂದು ಚಾಲನೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಭಸ್ಮವಾಗಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ರಾತ್ರಿ 1.30ರ ಸುಮಾರಿಗೆ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿದ್ದ ಕಾರಿನಲ್ಲಿ ಈ ಘಟನೆ ನಡೆದಿದೆ.ಟವೆರಾ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಾರಿನಲ್ಲಿದ್ದ ಒಬ್ಬರಿಗೆ ಸಣ್ಣ ಪುಟ್ಟ ಸುಟ್ಟ ಗಾಯವಾಗಿದೆ.

ಶಾರ್ಟ್ ಸರ್ಕಿಟ್ ಘಟನೆಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಜೆ.ರವಿ, ಪ್ರಕಾಶ್, ರವಿಕುಮಾರ್, ಕುಮಾರಸ್ವಾಮಿ ಬಂದು ಬೆಂಕಿ ನಂದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.