ತುಮರಿ: ಕರೂರು ಹೋಬಳಿಯ ನಿಲ್ದೋಡಿ ಬಳಿ ಮೀನು ಹಿಡಿಯಲು ಹೋದವರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಕಾರ್ಗಲ್ ವನ್ಯಜೀವಿ ವಿಭಾಗದ ಗಸ್ತು ಪಡೆಯ ಮೂವರು ಸಿಬ್ಬಂದಿ ವಿರುದ್ಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೈತ ಮಂಜುನಾಥ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಾರ್ಗಲ್ ಪೊಲೀಸರು ಮಂಜುನಾಥ್ ಅವರಿಂದ ಘಟನೆಯ ವಿವರ ಪಡೆದಿದ್ದರು.
ಕಾರ್ಗಲ್ ವನ್ಯಜೀವಿ ವಿಭಾಗದ ಸಿಬ್ಬಂದಿ ಪರಶುರಾಮ, ಮೈಲಾರಪ್ಪ, ಪ್ರವೀಣ ಹಾಗೂ ವಾಚರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್‌ಸ್ಪೆಕ್ಟರ್ ಹೊಳಿಬಸಪ್ಪ ಹೋಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.