ADVERTISEMENT

ಕುವೆಂಪು ವಿ.ವಿ. ಕುಲಸಚಿವರ ವಿರುದ್ಧ ಜಾತಿನಿಂದನೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 14:36 IST
Last Updated 2 ಜನವರಿ 2020, 14:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.

‘ಕುಲಸಚಿವರಲ್ಲಿ ಮಾಹಿತಿ ಕೇಳಲು ಹೋದಾಗ ಅವರು ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ’ ಎಂದು ಆರೋಪಿಸಿವಿಶ್ವವಿದ್ಯಾಲಯದ ವಿದ್ಯಾರ್ಥಿ ಪವನ್ ಗ್ರಾಮಾಂತರ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದರು.

ದೂರಿನ ಮೇರೆಗೆ ಪ್ರಾರಂಭಿಕ ಮಾಹಿತಿ ಕಲೆ ಹಾಕಿದ ಪೊಲೀಸರು, ಕುಲಸಚಿವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.