ಶಿವಮೊಗ್ಗ: ಮಾಜಿ ಸಂಸದ ರಮೇಶ ಕತ್ತಿ ವಾಲ್ಮೀಕಿ ಸಮುದಾಯವನ್ನು ಅವಾಚ್ಯವಾಗಿ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಕೆ.ಆರ್.ಶ್ರೀಧರ್ ನೇತೃತ್ವದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಮೂಲಕ ಗೃಹ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ರಮೇಶ್ ಕತ್ತಿ ಅವರು ನಿಂದಿಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ರಾಜ್ಯದ ವಾಲ್ಮೀಕಿ ಸಮುದಾಯದವರ ಭಾವನೆಗಳಿಗೆ ಧಕ್ಕೆ ತಂದಿದೆ. ಸಮಾಜವನ್ನು ಅಪಮಾನ ಮಾಡಿರುವ ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಉಪಾಧ್ಯಕ್ಷ ಎನ್.ಟಿ.ಲೋಕಪ್ಪ, ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಎಂ.ಎಚ್.ಶೇಖರಪ್ಪ, ಚೋರಡಿ ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಚೋರಡಿ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹನುಮಂತಾಪುರ ಎಂ.ಚಂದ್ರಪ್ಪ ಹಾಗೂ ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಈ ವೇಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.