ಶಿವಮೊಗ್ಗ: ‘ಯಾವುದೇ ಸರ್ಕಾರವಾದರೂ ಜಾತಿಗಣತಿಯನ್ನು ವೈಜ್ಞಾನಿಕವಾಗಿ ನಡೆಸಬೇಕು. ಪ್ರಸ್ತುತ ರಾಜ್ಯದಲ್ಲಿ ಜಾತಿಗಣತಿ ಸರಿಯಾಗಿ ನಡೆದಿಲ್ಲ. ಯಾರ ಮನೆಗೂ ಹೋಗಿ ಗಣತಿ ಮಾಡಿಲ್ಲ ಎಂಬುದು ಬಹುತೇಕ ಸಾರ್ವಜನಿಕರ ಅಭಿಪ್ರಾಯ’ ಎಂದು ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್.ಎಂ.ಚಂದ್ರಶೇಖರಪ್ಪ ಹೇಳಿದ್ದಾರೆ.
‘ಜಾತಿ ಗಣತಿಯಿಂದ ಅನೇಕ ಜಾತಿಗಳಿಗೆ ನ್ಯಾಯ ಸಿಗುವುದಿಲ್ಲ. ಮನೆ ಮನೆಗೂ ಹೋಗಿ ಜಾತಿ ಹಾಗೂ ಜನರ ಆರ್ಥಿಕ ಸ್ಥಿತಿ ಗತಿಗಳ ನಿಖರವಾದ ಮಾಹಿತಿ ಪಡೆಯಬೇಕು. ಈ ಬಗ್ಗೆ ಜನರು ಜಾಗೃತರಾಗಬೇಕು. ಸಂಘ ಸಂಸ್ಥೆಗಳು, ಮಠಾಧೀಶರು, ಸಾರ್ವಜನಿಕರು ಇದನ್ನು ಪ್ರಶ್ನಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.