ADVERTISEMENT

ಚಂದ್ರಗುತ್ತಿ ರೇಣುಕಮ್ಮ ದೇವಿ ಜಾತ್ರೆ: ಬೆತ್ತಲೆ ಸೇವೆ ನಿಷೇಧಿಸಿ ಡಿಸಿ ಆದೇಶ

-

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 3:04 IST
Last Updated 19 ಫೆಬ್ರುವರಿ 2026, 3:04 IST
   

ಶಿವಮೊಗ್ಗ: ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ ವೇಳೆ ಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.

ಈ ನಿಷೇಧಾಜ್ಞೆಯು ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT