ADVERTISEMENT

ಶಿವಮೊಗ್ಗ: ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2025, 12:53 IST
Last Updated 28 ಜನವರಿ 2025, 12:53 IST
ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ಚಿರತೆ ದಾಳಿಯಿಂದ ಗಾಯಗೊಂಡ ಕರು
ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ಚಿರತೆ ದಾಳಿಯಿಂದ ಗಾಯಗೊಂಡ ಕರು   

ಶಿವಮೊಗ್ಗ: ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದಿದ್ದ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಿರಂತರವಾಗಿ ನಾಯಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಇದೀಗ ಕೊಟ್ಟಿಗೆ ಒಳಗೆ ದಾಳಿ ನಡೆಸಿ ಜಾನುವಾರಗಳನ್ನು ಗುರಿಯಾಗಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.