ADVERTISEMENT

ಹೊಳೆಹೊನ್ನೂರು: ಗಣೇಶ ವಿಸರ್ಜನೆ ವೇಳೆ ಮುಳುಗಿ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 4:29 IST
Last Updated 3 ಸೆಪ್ಟೆಂಬರ್ 2025, 4:29 IST
ಕುಶಾಲ್
ಕುಶಾಲ್   

ಹೊಳೆಹೊನ್ನೂರು: ಸಮೀಪದ ಕುರುಬರ ವಿಠಲಾಪುರದಲ್ಲಿ ಸೋಮವಾರ ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ.

ಇಟ್ಟಿಗೆಹಳ್ಳಿಯ ಕುಶಾಲ್ (10) ಮೃತ ಬಾಲಕ.

ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಗಣಪನ ಮೂರ್ತಿಯನ್ನು ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ಗಣಪನನ್ನು ಭದ್ರಾ ನಾಲೆಗೆ ವಿಸರ್ಜಿಸುವಾಗ ಅವಘಡ ನಡೆದಿದೆ. 

ADVERTISEMENT

ಸ್ಥಳೀಯರು ನಾಲೆಯಲ್ಲಿ ಹುಡುಕಾಡಿ ಶವ ಹೊರ ತೆಗೆದಿದ್ದಾರೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.