ಭದ್ರಾವತಿ: ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ತಾಲ್ಲೂಕು ಘಟಕದ ವತಿಯಿಂದ ಜ.9ರಂದು ನಗರದ ನ್ಯೂ ಟೌನ್ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲ್ಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಬಿ.ಜಗದೀಶ್ ರಾಷ್ಟ್ರಧ್ವಜಾರೋಹಣ ಹಾಗೂ ಪೇಪರ್ ಟೌನ್ ಪೊಲೀಸ್ ಠಾಣೆ ಉಪನಿರೀಕ್ಷಕಿ ಕವಿತಾ ನಾಡ ಧ್ವಜಾರೋಹಣ ಮತ್ತು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ವಿದ್ಯಾಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿ ಮನೀಶ್ ಪಿ. ಯಾದವ್ 10 ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ನಗರದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಲಿಖಿತ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ್, ವಿದ್ಯಾಸಂಸ್ಥೆಯ ಪ್ರಂಶುಪಾಲೆ ಹರಿಣಾಕ್ಷಿ, ನಗರಸಭೆ ಆಯುಕ್ತ ಪ್ರಕಾಶ್ ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಸೇರಿ ಇತರರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 11.30 ಮೂರು ಗೋಷ್ಠಿಗಳು ಆಯೋಜನೆಗೊಂಡಿವೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ವೇದಿಕೆಯ ಪ್ರಧಾನ ಕಾರ್ಯದರ್ಶಿ ಉಮಾಪತಿ, ಖಜಾಂಚಿ ಗಂಗರಾಜ್, ಸಂಘಟನಾ ಕಾರ್ಯದರ್ಶಿ ಬಿ.ಕಾಂತಪ್ಪ, ಕಮಲಾ ಕುಮಾರಿ, ಮಲ್ಲಿಕಾಂಬ, ವಿರೂಪಾಕ್ಷ, ಕೊಡಲು ಯಜ್ಞಯ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.