ADVERTISEMENT

ಅಸ್ವಸ್ಥರಾಗಿದ್ದ ಮಕ್ಕಳು ಚೇತರಿಕೆ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 15:45 IST
Last Updated 27 ಜೂನ್ 2022, 15:45 IST

ಸಾಗರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ದಿಢೀರನೆ ಅಸ್ವಸ್ಥರಾಗಿದ್ದ 14 ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ವಿವಿಧ ಕಾಯಿಲೆಗಳ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ರೋಗ ನಿರೋಧಕ ಚುಚ್ಚುಮದ್ದು ನೀಡಿದ ನಂತರ ಅವರಲ್ಲಿ ಚಳಿ ಜ್ವರ, ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. 14 ಮಕ್ಕಳ ಪೈಕಿ ನಾಲ್ವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಕೆ.ಎಸ್.ಮೋಹನ್ ತಿಳಿಸಿದ್ದಾರೆ.

ಜಿಲ್ಲಾ ವೈದ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ತಾಯಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ನಾಗರಾಜ್ ನಾಯ್ಕ್, ಜಿಲ್ಲಾ ಸಹಾಯಕ ಔಷಧಿ ನಿಯಂತ್ರಕ ಡಾ.ವೀರೇಶ್ ಬಾಬು, ಮಲೇರಿಯ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.