ADVERTISEMENT

ಶಿವಮೊಗ್ಗ | ಮೇನ್‌ ಮಿಡ್ಲಿಸ್ಕೂಲ್‌: ಮಕ್ಕಳ ದಿನ, ಪೋಷಕರ ಮಹಾಸಭೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 5:22 IST
Last Updated 17 ನವೆಂಬರ್ 2025, 5:22 IST
ಶಿವಮೊಗ್ಗದ ಬಿ.ಎಚ್. ರಸ್ತೆಯ ಸರ್ಕಾರಿ ಆಂಗ್ಲ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಮೈನ್‌ ಮಿಡ್ಲಿ ಸ್ಕೂಲ್) ನಡೆದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯ ನೋಟ
ಶಿವಮೊಗ್ಗದ ಬಿ.ಎಚ್. ರಸ್ತೆಯ ಸರ್ಕಾರಿ ಆಂಗ್ಲ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಮೈನ್‌ ಮಿಡ್ಲಿ ಸ್ಕೂಲ್) ನಡೆದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯ ನೋಟ   

ಶಿವಮೊಗ್ಗ : ಇಲ್ಲಿನ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಆಂಗ್ಲ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಮೈನ್‌ ಮಿಡ್ಲಿ ಸ್ಕೂಲ್) ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆ ಆಯೋಜಿಸಲಾಗಿತ್ತು.

ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳು ಉಳಿಯಬೇಕಾಗಿದೆ. ಸರ್ಕಾರದ ನೆರವು ಅತ್ಯಗತ್ಯ. ಮಕ್ಕಳ ಮನಸ್ಸು ಬಹಳ ಮೃದುವಾದದ್ದು ಅವರನ್ನು ನಾವು ನೋಯಿಸಬಾರದು. ಈ ಶಾಲೆಯ ಶಿಕ್ಷಕರು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. 

ಮುಖ್ಯ ಶಿಕ್ಷಕಿ ಕವಿತಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳಿವೆ. ಅದರಲ್ಲೂ ನಮ್ಮ ಶಾಲೆಯಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿವೆ. ಮಕ್ಕಳ ಏಳಿಗೆಗಾಗಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ. ಪೋಷಕರು ನಮ್ಮೊಂದಿಗೆ ಸಹಕರಿಸಬೇಕು ಎಂದರು.

ADVERTISEMENT

ಈ ಸಂದರ್ಭದಲ್ಲಿ ಮಕ್ಕಳಿಂದ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ನೀಡಲಾಯಿತು. ಶಿಕ್ಷಕ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ನಿರೂಪಿಸಿ, ಶೀಲಾ ವಂದಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.