ADVERTISEMENT

ಸ್ವಚ್ಛ ಸರ್ವೇಕ್ಷಣೆ; ಶಿವಮೊಗ್ಗಕ್ಕೆ ಪ್ರಶಸ್ತಿ ಗರಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 21:33 IST
Last Updated 27 ಸೆಪ್ಟೆಂಬರ್ 2022, 21:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಿವಮೊಗ್ಗ: ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ದೇಶದ ಅತ್ಯುತ್ತಮ ನಗರಗಳಲ್ಲೊಂದು ಎಂಬ ಶ್ರೇಯಕ್ಕೆ ಶಿವಮೊಗ್ಗ ನಗರ ಪಾತ್ರವಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಸಮೀಕ್ಷೆ ನಡೆಸಿದ್ದ ಕೇಂದ್ರ ಸರ್ಕಾರ, ಸ್ವಚ್ಛತೆ ನಿಟ್ಟಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಕಾರ್ಯವೈಖರಿಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮೇಯರ್ ಸುನೀತಾ ಅಣ್ಣಪ್ಪ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ಅವರು ಅಕ್ಟೋಬರ್ 1ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.