ADVERTISEMENT

ಹಕ್ಕುಪತ್ರ ವಿತರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 2:59 IST
Last Updated 9 ಸೆಪ್ಟೆಂಬರ್ 2022, 2:59 IST
ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಸಬೇಕು ಎಂದು ಒತ್ತಾಯಿಸಿ ಶಿಕಾರಿಪುರ ತಾಲ್ಲೂಕಿನ ಸಾಲೂರು ಗ್ರಾಮದಿಂದ ತಾಲ್ಲೂಕು ಕಚೇರಿವರೆಗೆ ಸಾಗುವಳಿದಾರರು ಬುಧವಾರ ಪಾದಯಾತ್ರೆ ನಡೆಸಿದರು.
ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಸಬೇಕು ಎಂದು ಒತ್ತಾಯಿಸಿ ಶಿಕಾರಿಪುರ ತಾಲ್ಲೂಕಿನ ಸಾಲೂರು ಗ್ರಾಮದಿಂದ ತಾಲ್ಲೂಕು ಕಚೇರಿವರೆಗೆ ಸಾಗುವಳಿದಾರರು ಬುಧವಾರ ಪಾದಯಾತ್ರೆ ನಡೆಸಿದರು.   

ಶಿಕಾರಿಪುರ: ಅರಣ್ಯಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಸಬೇಕು ಎಂದು ಒತ್ತಾಯಿಸಿ ಅರಣ್ಯಭೂಮಿ ಸಾಗುವಳಿದಾರರ ಹೋರಾಟ ಸಮಿತಿ ನೇತೃತ್ವದಲ್ಲಿ ಅರಣ್ಯಭೂಮಿ ಸಾಗುವಳಿದಾರರು ಬುಧವಾರ ಪಾದಯಾತ್ರೆ ನಡೆಸಿದರು.

ತಾಲ್ಲೂಕಿನ ಸಾಲೂರು ಗ್ರಾಮದಿಂದ ತಾಲ್ಲೂಕು ಕಚೇರಿವರೆಗೆ ರೈತರು ಮೆರವಣಿಗೆ ನಡೆಸಿದರು.

ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಸಾವಿರಾರು ರೈತರು ಅರಣ್ಯ ಭೂಮಿಯಲ್ಲಿ ರೈತರು ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದಾರೆ. ಸಾಗುವಳಿದಾರರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುತ್ತಿದ್ದಾರೆ. ನ್ಯಾಯಾಲಯದಿಂದ ನೋಟಿಸ್ ನೀಡುತ್ತಿದ್ದಾರೆ. ಕೆಲವು ರೈತರ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ ಎಂದುನೇತೃತ್ವ ವಹಿಸಿದ್ದ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಅಧ್ಯಕ್ಷ ರಾಘವೇಂದ್ರನಾಯ್ಕ ಆರೋಪಿಸಿದರು.

ADVERTISEMENT

ಯಡಿಯೂರಪ್ಪ ಮುಖ್ಯಮಂತ್ರಿಆಗಿದ್ದಾಗ ಸಾಗುವಳಿದಾರರಿಗೆ ಹಕ್ಕುಪತ್ರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.

ಅರಣ್ಯಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಪದಾಧಿಕಾರಿಗಳಾದ ಶೇಖರನಾಯ್ಕ, ಕುಮಾರನಾಯ್ಕ, ಮಲ್ಲಿಕನಾಯ್ಕ, ಮಂಜುನಾಯ್ಕ, ಪ್ರೇಮ್ ಕುಮಾರನಾಯ್ಕ, ಚಂದ್ರುನಾಯ್ಕ, ಬನ್ನೂರು ಚರಣ್, ಅನಿಲ್, ಪುಟ್ಟ, ಗಿರೀಶ್, ಗೋಪಿಕೃಷ್ಣ, ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.