ADVERTISEMENT

ಗ್ರಂಥಾಲಯ ಜ್ಞಾನದ ಸಂಕೇತ: ನಾಗೇಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 16:32 IST
Last Updated 1 ಜೂನ್ 2025, 16:32 IST
ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಶನಿವಾರ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದನ ಪತ್ರ ನೀಡಿದರು
ಭದ್ರಾವತಿ ತಾಲ್ಲೂಕಿನ ಯರೇಹಳ್ಳಿಯಲ್ಲಿ ಶನಿವಾರ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಅಭಿನಂದನ ಪತ್ರ ನೀಡಿದರು   

ಭದ್ರಾವತಿ: ಗ್ರಂಥಾಲಯಗಳು ಜ್ಞಾನದ ಸಂಕೇತವಾಗಿದ್ದು, ಪ್ರತಿಯೊಬ್ಬರು ಸದುಪಯೋಗ ಪಡೆದುಕೊಂಡು ಜ್ಞಾನದ ಬೆಳಕಲ್ಲಿ ಮುನ್ನೆಡೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಹೇಳಿದರು.

ತಾಲ್ಲೂಕಿನ ಯರೇಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಅರಿವು ಕೇಂದ್ರದಲ್ಲಿ ಶನಿವಾರ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಅಭಿನಂದನ ಪತ್ರಗಳನ್ನು ವಿತರಿಸಿ ಮಾತನಾಡಿದರು.

ಯರೇಹಳ್ಳಿ ಗ್ರಂಥಾಲಯ ಅರಿವು ಕೇಂದ್ರದ ಬೇಸಿಗೆ ಶಿಬಿರವು ತಾಲ್ಲೂಕಿಗೆ ಮಾದರಿ ಶಿಬಿರವಾಗಿ ಯಶಸ್ವಿಗೊಂಡಿದೆ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರೂ, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರೂ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿನಿ ತನು ಶಿಬಿರದ ವರದಿ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.