ADVERTISEMENT

ಪ್ರಧಾನಿ ವಿರುದ್ಧದ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 6:10 IST
Last Updated 15 ಡಿಸೆಂಬರ್ 2022, 6:10 IST
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ರಾಜ ಪಟೇರಿಯ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ರಾಜ ಪಟೇರಿಯ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.   

ಸಾಗರ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ರಾಜ ಪಟೇರಿಯ ಅವರು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಾಗರದ ಉಪವಿಭಾಗಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂವಿಧಾನವನ್ನು ಉಳಿಸುವ ಸಲುವಾಗಿ ಮೋದಿಯವರನ್ನು ಕೊಲ್ಲಲು ಸಿದ್ಧರಾಗಿ’ ಎಂದು ರಾಜ ಪಟೇರಿಯ ನೀಡಿರುವ ಹೇಳಿಕೆ ಕಾಂಗ್ರೆಸ್ಸಿಗರ ಕೆಟ್ಟ ಮನಸ್ಥಿತಿಗೆ ಸಾಕ್ಷಿಯಾಗಿದೆ. ಈ ಮೂಲಕ ಪ್ರಧಾನಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರತಿಭಟನಕಾರರು ದೂರಿದರು.

ಪ್ರಧಾನಿ ವಿರುದ್ಧ ಹೇಳಿಕೆ ನೀಡಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಬಿಜೆಪಿಯ ಪ್ರಮುಖರಾದ ಕೆ.ಆರ್. ಗಣೇಶ್ ಪ್ರಸಾದ್, ಮಧುರಾ ಶಿವಾನಂದ್, ಸವಿತಾ ವಾಸು, ದೇವೇಂದ್ರಪ್ಪ, ಮೈತ್ರಿ ಪಾಟೀಲ್, ಸುಧಾ ಉದಯ್, ಸರೋಜ ಭಂಡಾರಿ, ಬಿ.ಎಚ್. ಲಿಂಗರಾಜ್, ವಿನೋದ್ ರಾಜ್, ಸಂತೋಷ್ ಆರ್.ಶೇಟ್, ಸತೀಶ್ ಕೆ. ರತ್ನಾಕರ್ ಶೇಟ್, ಮಹೇಶ್ ಎಂ.ಆರ್. ಕೃಷ್ಣಶೇಟ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.