ADVERTISEMENT

ಸೋನಿಯಾ ಜನ್ಮ ದಿನ: 8ಕ್ಕೆ ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 20:30 IST
Last Updated 3 ಡಿಸೆಂಬರ್ 2019, 20:30 IST
ಎಚ್.ಎಸ್.ಸುಂದರೇಶ್
ಎಚ್.ಎಸ್.ಸುಂದರೇಶ್   

ಶಿವಮೊಗ್ಗ:ಆದಿಚುಂಚನಗಿರಿ ಶಾಲಾ ಆವರಣದಲ್ಲಿಕಾಂಗ್ರೆಸ್ ಜಿಲ್ಲಾ ಘಟಕಡಿ.8ರ ಬೆಳಿಗ್ಗೆ 9.30ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಂಡಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ73ನೇ ಜನ್ಮ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ನಾರಾಯಣ ಹೃದಯಾಲಯ ಬೆಂಗಳೂರು, ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಶರಾವತಿ ದಂತ ವೈದ್ಯಕೀಯ ಕಾಲೇಜು ಆಸ್ಪತ್ರೆಯ ನುರಿತ ವೈದ್ಯರು ತಪಾಸಣೆ ನಡೆಸಲಿದ್ದಾರೆ. ಕಾಂಗ್ರೆಸ್ ರಾಜ್ಯ ಘಟಕದವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಎನ್.ರಾಘವೇಂದ್ರ, ಜಿಲ್ಲಾಧ್ಯಕ್ಷ ಡಾ.ಕ್ಸೆವಿಯರ್ ಪ್ರದೀಪ್ ಡಿಮೆಲ್ಲೊಶಿಬಿರ ಉದ್ಘಾಟಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಸ್.ಸುಂದರೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೃದಯ, ಮೂಳೆ, ನರರೋಗ, ಕಣ್ಣು, ಕಿವಿ, ಮೂಗು, ಗಂಟಲು, ದಂತ, ಥೈರಾಯ್ಡ್, ಸ್ತ್ರೀರೋಗ ತಪಾಸಣೆ ಹಾಗೂ ಚಿಕಿತ್ಸೆ, ಸರ್ಜರಿ, ಜನರಲ್ ಮೆಡಿಸಿನ್, ಇಸಿಜಿ, ಎಕೋ, ಮೆಮೊಗ್ರಪಿ ತಪಾಸಣೆಇರುತ್ತದೆ.ಚಿಕಿತ್ಸೆಯ ಆವಶ್ಯಕವಿದ್ದಲ್ಲಿಕಾಂಗ್ರೆಸ್‌ ಚಿಕಿತ್ಸಾ ವೆಚ್ಚ ಭರಿಸಲಿದೆ. 2ಸಾವಿರ ಜನರಿಗೆ ತಪಾಸಣೆ ನಡೆಸುವ ಗುರಿಇದೆ. ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಉಚಿತಎಂದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಇಸ್ಮಾಯಿಲ್ ಖಾನ್, ಎಲ್.ರಾಮೇಗೌಡ, ಎಚ್.ಎಂ.ಚಂದ್ರಶೇಖರಪ್ಪ, ಮುಕ್ತಿಯಾರ್ ಅಹಮದ್, ಎಸ್.ಪಿ.ಶೇಷಾದ್ರಿ, ರೇಖಾ ರಂಗನಾಥ್, ಆಸೀಫ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.