ADVERTISEMENT

ಹಸಿರುಮಕ್ಕಿ ಸೇತುವೆ ಕಾಮಗಾರಿ ತ್ವರಿತಗೊಳಿಸಲು ಕಾಂಗ್ರೆಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 5:47 IST
Last Updated 17 ನವೆಂಬರ್ 2021, 5:47 IST
ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನಿಟ್ಟೂರು ಘಟಕದ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನಿಟ್ಟೂರು ಘಟಕದ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.   

ಸಾಗರ: ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನಿಟ್ಟೂರು ಘಟಕದ ವತಿಯಿಂದ ಮಂಗಳವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ಕಾಗೋಡು ತಿಮ್ಮಪ್ಪ ಅವರು ಸಚಿವರಾಗಿದ್ದಾಗ ಹಸಿರುಮಕ್ಕಿ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು ಮಾಡಿ ಕಾಮಗಾರಿ ಆರಂಭಿಸಲಾಗಿತ್ತು. ಕಾಮಗಾರಿ ಪ್ರಾರಂಭಿಕ ಹಂತದಲ್ಲಿ ಬಿರುಸಿನಿಂದ ಸಾಗಿದ್ದು, ಇತ್ತೀಚಿನ ದಿನಗಳಲ್ಲಿ ಅದು ಕುಂಟುತ್ತಿದೆ. ಕಾಮಗಾರಿ ಚುರುಕುಗೊಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

ಹಸಿರುಮಕ್ಕಿ ಸೇತುವೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಂಡರೆ ಮಲೆನಾಡು ಪ್ರದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಸಾಧ್ಯವಾಗುತ್ತದೆ. ಕಾಮಗಾರಿಯನ್ನು ಇದೀಗ ನಿಲ್ಲಿಸಿರುವುದನ್ನು ನೋಡಿದರೆ ಹಣಕಾಸಿನ ಕೊರತೆ ಇದೆಯೋ ಎಂಬ ಅನುಮಾನ ಕಾಡುತ್ತಿದೆ. ಸೇತುವೆ ಕಾಮಗಾರಿಗಾಗಿ ಬಂದ ಯಂತ್ರೋಪಕರಣಗಳನ್ನು ಬೇರೆಡೆ ಸಾಗಿಸಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು.

ADVERTISEMENT

ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಚುರುಕು ಗೊಳಿಸದಿದ್ದರೆ ತಾಲ್ಲೂಕು ಆಡಳಿತದ ವಿರುದ್ಧ ಪಕ್ಷದ ವತಿಯಿಂದ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಸಿದರು.

ಕಾಂಗ್ರೆಸ್ ಪ್ರಮುಖರಾದ ಸಿ.ಆರ್. ನಾಗೇಂದ್ರ ಜೋಗಿ, ತಾರಾಮೂರ್ತಿ, ಮಂಜಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದಯ್ಯ ಜೈನ್ ನಾಗೋಡಿ, ವಿಶ್ವನಾಥ್, ರಾಘವೇಂದ್ರ ಆಚಾರಿ, ರವೀಂದ್ರ, ಉದಯ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.