ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸೋಮವಾರ ಕಾಶಿ ವಿಶ್ವನಾಥ ದೇವಾಲಯದಲ್ಲಿ ದೇವರಿಗೆ ರುದ್ರಾಭಿಷೇಕ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಗಿರೀಶ್, ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್.ಕುಮಾರೇಶ್, ಪ್ರಮುಖರಾದ ಕೆ.ಎಲ್.ಪವನ್, ಗುರುಪ್ರಸಾದ್, ಧರ್ಮ ಬೊಮ್ಮನಕಟ್ಟೆ, ವಸಂತ, ಸುಹಾಸ್ ಗೌಡ, ರಾಹುಲ್ ಸೀಗೆಹಟ್ಟಿ, ರಾಜೇಶ್ ಮಂದಾರ, ವಿನಯ್, ಕಾರ್ತಿಕ್, ಪ್ರಶಾಂತ್, ಜ್ಞಾನ ಶೇಖರ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.