ಶಿವಮೊಗ್ಗ: ‘ಮತಗಳ್ಳತನ ಮಾಡಿ ಗದ್ದುಗೆ ಹಿಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯುವಕರು, ರೈತರಿಗೆ ಪೂರಕವಾದ ಯೋಜನೆ ರೂಪಿಸದೆ ನಿರುದ್ಯೋಗ ಪ್ರಮಾಣ ಹೆಚ್ಚಿಸಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ದೂರಿದರು.
ನಗರ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಬುಧವಾರ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
11 ವರ್ಷಗಳಿಂದ ಸುಳ್ಳು ಭರಸೆಯನ್ನೇ ಬಂಡವಾಳ ಮಾಡಿಕೊಳ್ಳಲಾಗಿದೆ. ಇಲ್ಲಿ ಯಾವುದೇ ಹೊಸ ಉದ್ಯೋಗ ಸೃಷ್ಠಿಗೆ ಮೋದಿ ಅವರು ಪ್ರಯತ್ನಿಸುತ್ತಿಲ್ಲ. ಆದ್ದರಿಂದ, ಕೂಡಲೇ ಅವರು ಪ್ರಧಾನಿ ಪಟ್ಟದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.
75 ವರ್ಷ ಆದ ಮೇಲೆ ಅಧಿಕಾರ ಬಿಡಬೇಕು ಎಂಬುದು ಆರ್‌ಎಸ್ಎಸ್ ನಿಯಮ. ಇಲ್ಲಿ ಮೋದಿ ಅವರಿಗೆ 75 ವರ್ಷ ತುಂಬಿದೆ. ಆದ್ದರಿಂದ, ಅವರು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಮುಖಂಡ ಹೆಚ್.ಸಿ. ಯೋಗೇಶ್ ಒತ್ತಾಯಿಸಿದರು.
ಖಾಸಗಿ ಬಸ್ ನಿಲ್ದಾಣದ ಮುಂಭಾಗ ಕಾರ್ಯಕರ್ತರು ಬೋಂಡ ಬಜ್ಜಿ, ಟೀ, ಪೇಪರ್, ತರಕಾರಿ ಮಾರಾಟ ಮಾಡಿ, ಶೂ ಪಾಲಿಷ್ ಮಾಡಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಹರ್ಷಿತ್ ಗೌಡ, ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ, ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಸಕ್ಲೈನ್, ಪ್ರಮುಖರಾದ ಮಧುಸೂದನ್, ಚೇತನ್ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.