ADVERTISEMENT

ಮೆಗ್ಗಾನ್ ಹೊರಗುತ್ತಿಗೆ ನೌಕರ ಧರಣಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 14:26 IST
Last Updated 30 ಸೆಪ್ಟೆಂಬರ್ 2020, 14:26 IST
ಶಿವಮೊಗ್ಗ ವೈಧ್ಯಕೀಯ ಕಾಲೇಜಿಗೆ ಬುಧವಾರ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ಹೊರಗುತ್ತಿಗೆ ನೌಕರರ ಸಮಸ್ಯೆ ಆಲಿಸಿದರು.
ಶಿವಮೊಗ್ಗ ವೈಧ್ಯಕೀಯ ಕಾಲೇಜಿಗೆ ಬುಧವಾರ ಭೇಟಿ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ ಹೊರಗುತ್ತಿಗೆ ನೌಕರರ ಸಮಸ್ಯೆ ಆಲಿಸಿದರು.   

ಶಿವಮೊಗ್ಗ: ವೈದ್ಯಕೀಯ ಕಾಲೇಜು ಆವರಣದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ನೌಕರರು 9 ದಿನಗಳಿಂದ ನಡೆಸುತ್ತಿದ್ದಧರಣಿ ಸತ್ಯಾಗ್ರಹ ಬುಧವಾರ ಕೊನೆಗೊಂಡಿತು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರ ಮನವೊಲಿಸಿದರು. ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದರು.

ಕೊರೊನಾಸಂಕಷ್ಟದ ಸಮಯದಲ್ಲಿ ನಿರಂತರ ಧರಣಿಮಾಡುವುದು,ಕರ್ತವ್ಯಕ್ಕೆ ಗೈರು ಹಾಜರಾಗಿರುವುದು ಕಾನೂನು ಬಾಹಿರ. ರಾಜ್ಯದಲ್ಲಿ ಎಲ್ಲ ಹೊರಗುತ್ತಿಗೆ ನೌಕರರಿಗೆ ಅನ್ವಯಿಸುವ ಕಾನೂನೇ ನಿಮಗೂ ಅನ್ವಯವಾಗುತ್ತದೆ. ನಿಮಗೆ ಮಾತ್ರ ವೇತನ ಹೆಚ್ಚಿಸಲು ಸಾಧ್ಯವಿಲ್ಲ. ಇದು ಲಕ್ಷಾಂತರ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆ ಎಂದು ಮನವರಿಕೆ ಮಾಡಿಕೊಟ್ಟರು.

ADVERTISEMENT

ಹಿರಿಯ ಐಎಎಸ್ ಅಧಿಕಾರಿ ಶ್ರೀನಿವಾಸ್ ನೇತೃತ್ವದಲ್ಲಿ ಶಾಸಕ ಆಯನೂರು ಮಂಜುನಾಥ್ ಅವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.ಅವರ ವರದಿಗಾಗಿ ಕಾಯುತ್ತಿದ್ದೇವೆ. ಅಲ್ಲಿಯವರೆಗೆ ಸಂಯಮದಿಂದ ಇರಬೇಕು.ಕರ್ತವ್ಯಕ್ಕೆ ಹಾಜರಾಗದೇ ಇದ್ದರೆಗುತ್ತಿಗೆದಾರರಮೇಲೆ ಕ್ರಮ ಕೈಗೊಳ್ಳಲಾಗುವುದು. ನೀವೂಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟೆಂಡರ್ ಬದಲಾವಣೆ ಕಾರಣವೈದ್ಯಕೀಯ ಕಾಲೇಜಿನಲ್ಲಿ ಈಗಾಗಲೇ 130 ಭದ್ರತಾ ಸಿಬ್ಬಂದಿ ಕೆಲಸ ಕಳೆದುಕೊಂಡಿದ್ದಾರೆ. ಮಾನವೀಯತೆ ಕಾರಣಕ್ಕಾಗಿ ಅವರನ್ನು ಮರು ನೇಮಕ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

69 ಶುಶ್ರೂಷಕರು, 183 ಸ್ವಚ್ಛತಾ ಕಾರ್ಮಿಕರು ಕೆಲಸಕ್ಕೆ ಗೈರು ಹಾಜರಾಗಿದ್ದಾರೆ. 78 ಲ್ಯಾಬ್ ಟೆಕ್ನಿಷಿಯನ್‌ಗಳು ಎರಡು ದಿನಗಳ ಹಿಂದೆಯೇ ಕೆಲಸಕ್ಕೆ ಮರಳಿದ್ದಾರೆ ಎಂದು ಮಾಹಿತಿ ನೀಡಿದರು.

ಧರಣಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ವೆಂಕಟೇಶ್, ರಾಜಾವತ್ ಅವರನ್ನು ಬಿಡುಗಡೆ ಮಾಡಿಸುವಂತೆ ಸಚಿವರಿಗೆ ಮನವಿ ಮಾಡಿದರು.

ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ಡಾ.ರಘುನಂದನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.